ಹಾವೇರಿ: ಸಾಮಾಜಿಕ ಶೈಕ್ಷಣಿಕ ಮರು ಸಮೀಕ್ಷೆಗೆ ವಿಧಾನ ಪರಿಷತ್ ಸಭಾಪತಿ ಹೊರಟ್ಟಿ ಹಾವೇರಿಯಲ್ಲಿ ಆತಂಕ
Haveri, Haveri | Sep 17, 2025 ರಾಜ್ಯ ಸರ್ಕಾರ ಸಾಮಾಜಿಕ ಮತ್ತು ಶೈಕ್ಷಣಿಕ ಮರು ಸಮೀಕ್ಷೆ ಮಾಡುತ್ತಿರುವುದು ದೊಡ್ಡ ಅನಾಹುತ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅಭಿಪ್ರಾಯಪಟ್ಟಿದ್ದಾರೆ. ಹಾವೇರಿಯ ಜಿಲ್ಲಾಸ್ಪತ್ರೆಯಲ್ಲಿ ಮಾತನಾಡಿದ ಅವರು ಮರು ಸಮೀಕ್ಷೆ ಮಾಡುವ ಅವಶ್ಯಕತೆ ಏನಿದೆ ಎಂದು ಹೊರಟ್ಟಿ ಪ್ರಶ್ನಿಸಿದರು. ಇದರಿಂದ ಸಮಾಜಕ್ಕೆ ದೊಡ್ಡ ಹೊಡೆತ ಬೀಳಲಿದೆ ಎಂದು ಹೊರಟ್ಟಿ ತಿಳಿಸಿದರು.