ಕಾರವಾರ: ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಜೆಪಿ ಶಿರಸಿ ಗ್ರಾಮೀಣ ಮಂಡಲ ಪ್ರತಿಭಟನೆ, ಸ್ಪಂದಿಸಿದ ಜಿಲ್ಲಾಡಳಿತ
ಶಿರಸಿ: ಶಿರಸಿಗೆ ತಹಶೀಲ್ದಾರ್ ನೇಮಕ ಆಗಬೇಕೆಂದು ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಸೋಮವಾರ ಕಾರವಾರದಲ್ಲಿ ಬಿಜೆಪಿ ಗ್ರಾಮೀಣ ಮಂಡಲದ ವತಿಯಿಂದ ಕಾರವಾರ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ತಕ್ಷಣದಿಂದಲೇ ಜಾರಿಯಾಗುವಂತೆ, ಶಿರಸಿಯ ಉಪ ತಹಶೀಲ್ದಾರ್ ಆಗಿದ್ದ ರಮೇಶ ಹೆಗಡೆ ಅವರನ್ನು, ತಹಶೀಲ್ದಾರ್ ಗ್ರೇಡ್ 1 ಹೆಚ್ಚುವರಿ ಪ್ರಭಾರಿಯಾಗಿ ನೇಮಕ ಮಾಡಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಈ ಹೋರಾಟದಲ್ಲಿ ಶಿರಸಿ ಗ್ರಾಮೀಣ ಮಂಡಲ ಅಧ್ಯಕ್ಷೆ ಉಷಾ ಹೆಗಡೆ, ರೈತಮೋರ್ಚಾದ ರಮೇಶ ನಾಯ್ಕ ಕುಪ್ಪಳ್ಳಿ ಸೇರಿದಂತೆ ಗ್ರಾಮೀಣ ಮಂಡಲದ 50 ಕ್ಕೂ ಹೆಚ್ಚಿನ ಬಿಜೆಪಿಗರು ಪಾಲ್ಗೊಂಡಿದ್ದರು.