ಯಲಹಂಕದ ಕೋಗಿಲು ಬಳಿ ಸರ್ವೆ ನಂ. 99 ರಲ್ಲಿ ಲಭ್ಯವಿರುವ ಒಟ್ಟು 14 ಎಕರೆ 36 ಗುಂಟ ವಿಸ್ತೀರ್ಣದ ಜಮೀನಿನಲ್ಲಿ, ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ (BSWML) ವತಿಯಿಂದ ಪ್ರಸ್ತಾವಿತ ಬಯೋ ಮೆಥನೈಸೇಶನ್ ಪ್ಲಾಂಟ್, ಅನಿಮಲ್ ರೆಂಡರಿಂಗ್, ಅನಿಮಲ್ ಇನ್ಸಿನರೇಷನ್, ಎಳನೀರು ಬುರುಡೆ ಸಂಸ್ಕರಣಾ ಮತ್ತು ಸ್ಯಾನಿಟರಿ ತ್ಯಾಜ್ಯ ಸಂಸ್ಕರಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಯೋಜಿಸಲಾಗಿತ್ತು. ಬೆ.ಘ.ತ್ಯಾ.ನಿ ನಿಯಮಿತಕ್ಕೆ ಮೀಸಲಿರಿಸಿದ್ದ ಜಾಗದಲ್ಲಿ ಸುಮಾರು 5 ಎಕರೆ ಜಾಗವನ್ನು ಅಕ್ರಮವಾಗಿ ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡು ತಾತ್ಕಾಲಿಕವಾಗಿ 150ಕ್ಕೂ ಹೆಚ್ಚು ಶೆಡ್/ಮನೆಗಳನ್ನು ನಿರ್ಮಾಣ ಮಾಡಿಕೊಂಡಿದ್ದರು.