ಬೆಂಗಳೂರು ದಕ್ಷಿಣ: ನಗರದಲ್ಲಿ ಒಣ ತ್ಯಾಜ್ಯ ನಿರ್ವಹಣೆಯ ಘಟಕ ಪರಿಶೀಲನೆ ನಡೆಸಿದ ಡಿಸಿಎಂ ಡಿಕೆ ಶಿವಕುಮಾರ್
ಭಾನುವಾರ ಮಧ್ಯಾಹ್ನ 11 ಗಂಟೆ ಸುಮಾರಿಗೆ ಬೆಂಗಳೂರು ನಗರದ ನಾಗರಿಕರಿಗೆ ಸ್ಪಂದಿಸಲು 'ಬೆಂಗಳೂರು ನಡಿಗೆ' ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಜಯನಗರದ ಒಣ ತ್ಯಾಜ್ಯ ನಿರ್ವಹಣೆಯ ಘಟಕಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಶಾಸಕರು, ಸಾರಿಗೆ ಸಚಿವರಾದ ಶ್ರೀ ರಾಮಲಿಂಗಾ ರೆಡ್ಡಿಯವರು ಹಾಗೂ ಅಧಿಕಾರಿಗಳು ಒಣ ತ್ಯಾಜ್ಯ ನಿರ್ವಹಣೆಯ ಘಟಕದ ಕಾರ್ಯವೈಖರಿ ಕುರಿತು ಮಾಹಿತಿ ನೀಡಿದರು. ಕಸ ನಿರ್ವಹಣೆ ಎಂಬುದು ಬೆಂಗಳೂರಿನ ಅತಿದೊಡ್ಡ ಸಮಸ್ಯೆಗಳಲ್ಲಿ ಒಂದಾಗಿದೆ. ಹೀಗಾಗಿ ಒಣ ತ್ಯಾಜ್ಯ ನಿರ್ವಹಣೆ ಅನಿವಾರ್ಯವಾಗಿದ್ದು, ಇದಕ್ಕೆ ಬೇಕಾಗಿರುವ ಎಲ್ಲಾ ಸೌಲಭ್ಯಗಳನ್ನು ಸರ್ಕಾರ ಒದಗಿಸಲು ಬದ್ಧವಾಗಿದೆ ಎಂದರು.