ಶಿವಮೊಗ್ಗ: ಶಿಕ್ಷಕ ವೃತ್ತಿಯಲ್ಲಿ ಯಶಸ್ಸು ಕಠಿಣ ನಗರದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ ಅಭಿಪ್ರಾಯಪಟ್ಟರು
ನಗರದ ಎಟಿಎನ್‌ಸಿಸಿ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ, ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ವಾಣಿಜ್ಯಶಾಸ್ತ್ರದ ಮುಖ್ಯಸ್ಥ, ಸಹ ಪ್ರಾಧ್ಯಾಪಕ ಪ್ರೊ. ಎಸ್.ಜಗದೀಶ್ ಅವರಿಗೆ ಏರ್ಪಡಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಶಿಕ್ಷಕ ವೃತ್ತಿಯಲ್ಲಿ ಯಶಸ್ಸು ಕಾಣುವುದು ತುಂಬಾ ಕಠಿಣ ಕೆಲಸ ಶಾಸಕ ಎಸ್.ಎನ್.ಚನ್ನಬಸಪ್ಪ ಅಭಿಪ್ರಾಯಪಟ್ಟರು. ನಗರದ ಪ್ರತಿಷ್ಠಿತ ಕಾಲೇಜು ಎಟಿಎನ್‌ಸಿಸಿಯಲ್ಲಿ ಕೆಲಸ ಮಾಡುವ ಅವಕಾಶ ಸಿಗುವುದು ಒಂದು ಭಾಗ್ಯ. ನಿವೃತ್ತಿ ಜೀವನವು ಸಮಾಜಮುಖಿಯಾಗಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಮುಂದಾಗಬೇಕು ಎಂದರು. ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಅರುಣ್, ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಡಾ. ಕೆ.ಎ.ವಿಷ್ಣುಮೂರ್ತಿ ಇದ್ದರು.