ಕ್ರೀಡೆಗಳಿಂದ ಮಕ್ಕಳಲ್ಲಿ ಆರೋಗ್ಯ, ದೈಹಿಕ ಹಾಗೂ ಮಾನಸಿಕ ಜ್ಞಾನ ವೃದ್ಧಿಯಾಗಲಿದೆ. ರಾಜ್ಯ ಮಟ್ಟದ ಕ್ರೀಡಾಕೂಟ ಹಮ್ಮಿಕೊಂಡಿರುವುದು ಶ್ಲಾಘನೀಯವಾಗಿದೆ. ಕ್ರೀಡಾಪಟುಗಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಇಂತಹ ಕ್ರೀಡಾಕೂಟಗಳ ಮೂಲಕ ನಮ್ಮ ಜಿಲ್ಲೆಯಲ್ಲಿರುವ ಪ್ರತಿಭೆಗಳು ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ಬೆಳೆಯಲು ಅವಕಾಶ ಕಲ್ಪಿಸಿದಂತಾಗುತ್ತದೆ ಎಂದು ಕಾಂಗ್ರೆಸ್ ರಾಜ್ಯ ಯುವ ಮುಖಂಡರಾದ ರವಿ ಬೋಸರಾಜು ಉಪಸ್ಥಿತರಿದ್ದರು ವ್ಯಕ್ತಪಡಿಸಿದರು.