ಜಗಳೂರು: ಆಂಗ್ಲಭಾಷೆ ನಾಮಫಲಕ ತೆರವುಗೊಳಿಸಲು ಒತ್ತಾಯಿಸಿ ಪಟ್ಟಣದಲ್ಲಿ ಕರವೇ ಪ್ರತಿಭಟನೆ
ಪಟ್ಟಣ ಪಂಚಾಯತಿ ಕಚೇರಿ ಆವರಣದಲ್ಲಿ ಮಂಗಳವಾರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಆಂಗ್ಲ ಭಾಷೆಯ ನಾಮಫಲಕ ತೆರವುಗೊಳಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು. ಇದೇ ವೇಳೆ ಕರವೇ ಕಾರ್ಯಕರ್ತರು ಪಂಚಾಯತಿ ಕಚೇರಿ ಬಳಿ ಜಮಾಯಿಸಿ ಮುಖ್ಯಾಧಿಕಾರಿ ಲೋಕ್ಯ ನಾಯಕ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.