ಕಾರವಾರ: ದೈವಜ್ಞ ಕಲ್ಯಾಣ ಮಂಟಪದಲ್ಲಿ ಸರ್ಕಾರಿ ನೌಕರರ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸರ್ಕಾರಿ ನೌಕರರ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶನಿವಾರ ಸಂಜೆ 3.10ಕ್ಕೆ ನಡೆಯಿತು. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಾಕ್ಷರಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯ ಸರಕಾರಿ ನೌಕರರಿಗೆ 2026-27 ಅಂತ್ಯದೊಳಗೆ ಕೇಂದ್ರ ವೇತನ ಜಾರಿಗೆ ತರಲು ಸಂಘ ಬದ್ಧವಾಗಿದ್ದು, ಹಬ್ಬದ ಮುಂಗಡವನ್ನು 25 ದಿಂದ 50 ಸಾವಿರದವರೆಗೆ ಹೆಚ್ಚಳ, ಎನ್ಪಿಎಸ್ ಬದಲಾಗಿ ಒಪಿಎಸ್ ಜಾರಿಗೆ ತರುವ ಬಗ್ಗೆ ಸಂಘ ಸತತವಾಗಿ ಪ್ರಯತ್ನಿಸುತ್ತಿದ್ದು, ರಾಜ್ಯದ ನೌಕರರು ನೆಮ್ಮದಿಯಂದ ಇರುವಂತೆ ಮಾಡುವುದು ಸಂಘದ ಕರ್ತವ್ಯವಾಗಿದೆ ಎಂದರು.