ಪಾಂಡವಪುರ ತಾಲೂಕಿನ ದೊಡ್ಡ ಬ್ಯಾಡರಹಳ್ಳಿ ಗ್ರಾಮದಲ್ಲಿ ಚಿರತೆ ಸೆರೆಗೆ ಬೋನ್ ಇಟ್ಟ ಸಿಬ್ಬಂದಿ ಪಾಂಡವಪುರ ತಾಲೂಕಿನ ದೊಡ್ಡ ಬ್ಯಾಡರಹಳ್ಳಿ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಚಿರತೆ ಉಪಟಳದಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಚಿರತೆಗೆ ಹಲವು ಜಾನುವಾರುಗಳು ಬಲಿಯಾಗಿವೆ. ಈ ಹಿನ್ನೆಲೆಯಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಗ್ರಾಮಸ್ಥರು ದೂರು ನೀಡಿದ್ದಾರೆ. ಶಾಸಕರ ಆದೇಶದ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆಯನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಇದಕ್ಕಾಗಿ ಗ್ರಾಮದ ಜಮೀನೊಂದರಲ್ಲಿ ಬೋನ್ ಇಟ್ಟು, ಅದರಲ್ಲಿ ನಾಯಿಯನ್ನು ಕಟ್ಟಿದ್ದಾರೆ.