ಬೆಳಗಾವಿ: ನಗರದಲ್ಲಿ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಶಾಸಕ ಆಸಿಫ್ ಸೇಠ್ ಚಾಲನೆ
ನಗರದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಶಾಸಕ ಆಸಿಫ್ ಸೇಠ್ ಚಾಲನೆ ನೀಡಿದರು. ಬೆಳಗಾವಿಯ ವಿಶ್ವೇಶ್ವರಯ್ಯ ನಗರದಿಂದ ಆರಂಭಿಸಿದ. ಈ ಸಮೀಕ್ಷೆಯಲ್ಲಿ ಶಿಕ್ಷಕರು ಮನೆಯಲ್ಲಿ ಕುಟುಂಬದ ಸದಸ್ಯರಿಂದ ದಾಖಲೆಗಳನ್ನು ಪಡೆದು ಮಾಹಿತಿ ಸಂಗ್ರಹಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಉಪಸ್ಥಿತರಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಮಾರ್ಗಸೂಚಿ ಪ್ರಕಾರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೋಮವಾರ ಶಾಸಕ ಆಸೀಫ್ ಸೇಠ್ ಅವರು ಚಾಲನೆ ನೀಡಿದರು