ಮೊಳಕಾಲ್ಮುರು:-ಮ್ಯಾಸಬೇಡ ಬುಡಕಟ್ಟು ಸಮುದಾಯವು ತನ್ನದೇ ಆದ ವಿಶೇಷ ಮತ್ತು ವಿಶಿಷ್ಟ ಸಂಸ್ಕೃತಿ ಸಂಪ್ರದಾಯಗಳನ್ನು ರೂಢಿಗತ ಮಾಡಿಕೊಂಡಿದೆ ಇಂದಿನ ಆಧುನಿಕ ಕಾಲದಲ್ಲಿಯೂ ಕೂಡ ತಮ್ಮ ಸಂಪ್ರದಾಯಗಳನ್ನು ಮುಂದುವರಿಸಿಕೊಂಡು ಬರುತ್ತಿರುವುದು ವಿಶೇಷ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಚಿಕ್ಕುo ತಿ ಗ್ರಾಮದಲ್ಲಿ ಮ್ಯಾಸ ಬೇಡ ಬುಡಕಟ್ಟು ಸಂಸ್ಕೃತಿಯಂತೆ ಧೂಳೆ ಹಬ್ಬ (ಮರು ದೀಪಾವಳಿ) ಅದ್ದೂರಿಯಾಗಿ ನಡೆಯಿತು. ಪ್ರತಿ ವರ್ಷವೂ ಕೂಡ ದೀಪಾವಳಿ ಹಬ್ಬ ಮುಗಿದ ನಂತರ ಈ ಹಬ್ಬಕ್ಕೆ ಚಾಲನೆ ನೀಡಲಾಗುತ್ತದೆ. ಶುಕ್ರವಾರದಂದು ಈ ಹಬ್ಬಕ್ಕೆ ಆರಂಭ ಸಿಕ್ಕಿತು.