ಇಳಕಲ್: ಗುರಿಯನ್ನು ಹೊಂದಿದಾಗ ಮಾತ್ರ ಸಾಧನೆ ಮಾಡಲು ಸಾಧ್ಯ : ನಗರದಲ್ಲಿ ಪಿಎಸ್‌ಐ ಮಂಜುನಾಥ ಪಾಟೀಲ
Ilkal, Bagalkot | Oct 15, 2025 ಜೀವನದಲ್ಲಿ ವ್ಯಕ್ತಿತ್ವ ವಿಕಸನ ಕುರಿತು ವಿದ್ಯಾರ್ಥಿಗಳು ವಿವಿಧ ಕೌಶಲ್ಯ ತರಬೇತಿಗಳ ಬಗ್ಗೆ ಆಸಕ್ತಿ ವಹಿಸಿ ಅವುಗಳ ಮುಖಾಂತರ ನಿಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಶಹರ್ ಪೋಲಿಸ್ ಠಾಣೆಯ ಪಿಎಸ್‌ಐ ಮಂಜುನಾಥ ಪಾಟೀಲ ಹೇಳಿದರು. ಇಳಕಲ್ಲದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅ.೧೫ ಬುಧವಾರ ಮಧ್ಯಾಹ್ನ ೨ ಗಂಟೆಗೆ ನಡೆದ ಮುಖಮುಖಿ ಸಾಮಾಜಿಕ ಸ್ಪಂದನ ಸಂಸ್ಥೆ, ತುಮಕೂರಿನ ಕೌಶಲ್ಯ ತರಬೇತಿ ಕೇಂದ್ರದ ವತಿಯಿಂದ ಎರಡು ತಿಂಗಳಿಗೂ ಹೆಚ್ಚು ಅವಧಿಯಲ್ಲಿ ನಡೆದ ಕೌಶಲ್ಯ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರಶಸ್ತಿ ಪತ್ರ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಆರಿಫ್ ಮೊಹಮ್ಮದ್ ವಹಿಸಿದ್ದರು.ಕಾರ್ಯಕ್ರಮದಲ್ಲ