ಬಂಗಾರಪೇಟೆ: ಸುಂದರಪಾಳ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ
ಭಾರತ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರ 75 ಹುಟ್ಟುಹಬ್ಬದ ಅಂಗವಾಗಿ ಸಾವಿರ ಗಿಡಗಳ ನಾಟಿ ಮಾಡುವ ಕಾರ್ಯಕ್ಕೆ ಗಣ್ಯರು ಚಾಲನೆ ನೀಡುವ ಮೂಲಕ ಹುಟ್ಟು ಹಬ್ಬ ಆಚರಣೆ ಮಾಡಲಾಯಿತು.ಗ್ರಾಮದ ಸಮೀಪದ ಸುಂದರಪಾಳ್ಯ ಗ್ರಾಮದಲ್ಲಿ ಕೆಜಿಎಫ್ ನಗರ ಘಟಕ ಹಾಗೂ ಗ್ರಾಮಾಂತರ ಘಟಕದ ವತಿಯಿಂದ ಒಂದು ಸಾವಿರ ಗಿಡಗಳನ್ನು ನಾಟಿ ಮಾಡುವ ಕಾರ್ಯಕ್ಕೆ ಬುಧವಾರ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು. ಈ ವೇಳೆ ಕೆಜಿಎಫ್ ತಾಲೂಕು ಟಿಎಪಿಎಂಎಸ್ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಬುಧವಾರ ಮಾತನಾಡಿ, ದೇಶದ ಪ್ರಧಾನಿ ನರೇಂದ್ರ ಮೋದಿಜಿ ಅವರು ಸತತವಾಗಿ ಮೂರು ಬಾರಿ ಪ್ರಧಾನ ಮಂತ್ರಿ ಆಗಿ ಆಯ್ಕೆಯಾಗುವ ಮೂಲಕ ದೇಶಕ್ಕೆ ಅಪಾರವಾದ ಸೇವೆಯನ್ನು ಸಲ್ಲಿಸಿದ್ದಾರೆ, ದೇಶದ ಪ್ರತಿಯೊಬ್ಬರು ಹೆಮ್ಮೆ ಪಡುವಂತಹ ಆಡಳಿತವನ್ನು ನೀಡಿದ್ದಾರೆ ಎಂದು ತಿಳಿಸಿದ್ರು