ದಾಂಡೇಲಿ: ಟ್ರಕ್ ಟರ್ಮಿನಲ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮದ್ನಳ್ಳಿಯಲ್ಲಿ ಸಂಸದರಿಗೆ ದಾಂಡೇಲಿ ಟ್ರಾನ್ಸಪೋರ್ಟ್ ಆಪರೇಟರ್ಸ್ ಅಸೋಸಿಯೇಷನ್ ಮನವಿ
ದಾಂಡೇಲಿ : ನಗರದ ಹಳಿಯಾಳ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ದೇವರಾಜ್ ಅರಸು ಟ್ರಕ್ ಟರ್ಮಿನಲ್ ಕಾಮಗಾರಿಯು ವಿಳಂಬ ಗತಿಯಲ್ಲಿ ಸಾಗುತ್ತಿರುವುದರಿಂದ, ಟ್ರಕ್'ಗಳ ನಿಲುಗಡೆಗೆ ತೀವ್ರ ತೊಂದರೆಯಾಗಿದೆ. ಪರಿಣಾಮವಾಗಿ ಪಾರ್ಕಿಂಗ್ ಸಮಸ್ಯೆ ಜ್ವಲಂತ ಸಮಸ್ಯೆಯಾಗಿಯೇ ಉಳಿದುಕೊಂಡಿದೆ. ಆದ್ದರಿಂದ ದೇವರಾಜ್ ಅರಸು ಟ್ರಕ್ ಟರ್ಮಿನಲ್ ಕಾಮಗಾರಿಯು ಶೀಘ್ರ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಮತ್ತು ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮವನ್ನು ಕೈಗೊಳ್ಳುವಂತಾಗಲು ಸಂಸದರ ನಿಧಿಯಿಂದ ವಿಶೇಷ ಅನುದಾನವನ್ನು ಮಂಜೂರು ಮಾಡುವಂತೆ ದಾಂಡೇಲಿ ಟ್ರಾನ್ಸಪೋರ್ಟ್ ಆಪರೇಟರ್ಸ್ ಅಸೋಸಿಯೇಷನ್ ನಿಯೋಗವು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಇಂದು ಸೋಮವಾರ ಬೆಳಿಗ್ಗೆ 10:30 ಗಂಟೆ ಸುಮಾರಿಗೆ ಮನವಿಯನ್ನು ಮಾಡಿತು.