ಪಾಂಡವಪುರ: ಉಪರಾಷ್ಟ್ರಪತಿಗಳ ಭೇಟಿ ಹಿನ್ನೆಲೆಯಲ್ಲಿ ಮೇಲುಕೋಟೆಯಲ್ಲಿ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ & ಟೇಕಾಫ್ ಬಗ್ಗೆ ಡಿಸಿ ಪರೀಶೀಲನೆ
ಉಪರಾಷ್ಟ್ರಪತಿಗಳ ಭೇಟಿ ಹಿನ್ನೆಲೆ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಯಲ್ಲಿ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ಹಾಗೂ ಟೇಕಾಫ್ ಕುರಿತು ಜಿಲ್ಲಾಧಿಕಾರಿಗಳಿಂದ ಪರೀಶೀಲನೆ ನಡೆಸಲಾಯಿತು. ನ.9 ರಂದು ಭಾನುವಾರ ಉಪರಾಷ್ಟ್ರಪತಿಗಳು ಜಿಲ್ಲೆಯ ಮೇಲುಕೋಟೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೇಲುಕೋಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದ ಮೈದಾನದಲ್ಲಿ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ಹಾಗೂ ಟೇಕಾಫ್ ಮಾಡುವ ಮೂಲಕ ಭದ್ರತಾ ಪರೀಶೀಲನೆಯನ್ನು ಜಿಲ್ಲಾಧಿಕಾರಿ ಡಾ ಕುಮಾರ ಅವರು ನಡೆಸಿದರು. ಶುಕ್ರವಾರ ಸಂಜೆ 4 ಗಂಟೆಯಲ್ಲಿ ಜಿಲ್ಲಾಧಿಕಾರಿಗಳು ಮೇಲುಕೋಟೆಯ ಹೆಲಿಕಾಪ್ಟರ್ ಲ್ಯಾಂಡಿಂಗ್ ಸ್ಥಳಕ್ಕೆ ಭೇಟಿ ನೀಡಿ ಭಾರತೀಯ ವಾಯುಸೇನೆಯ ಅಧಿಕಾರಿಗಳ ಜೊತೆಗೂಡಿ ಹೆಲಿಕ್ಯಾಪ್ಟರ್ ಅನ್ನು ಇಳಿಸಿ ನೋಡಿ ಹಾಗೂ ಟೇಕಾಫ್ ಮಾಡುವ