ಶಿಡ್ಲಘಟ್ಟ: ಮಹಿಳೆಯ ಸರ ಕದಿದ್ದ ಆರೋಪಿಯನ್ನು ಬಂಧಿಸಿದ ಗುಡಿಬಂಡೆ ಪೊಲೀಸರು
ಮಹಿಳೆಯ ಸರ ಕದ್ದು ಎಸ್ಕೇಪ್ ಆಗಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಓಬಣ್ಣಗಾರಹಳ್ಳಿ ನಡೆದಿದ್ದ ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲೆ ಬೀಸಿದ್ದ ಪೊಲೀಸರು ಮಹಾರಾಷ್ಟ್ರ ಮೂಲದ ಸಾಧೀಕ್ ರಫೀಕ್ ಖಾನ್ ಎಂಬುವವರನ್ನು ಬಂಧಿಸಿದ್ದಾರೆ.ಗ್ರಾಮದ ಚೌಡಮ್ಮ ಎಂಬುವವರ ಸರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಅದರಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೊನೆಗೂ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.