ಹಾವೇರಿ ಜಿಲ್ಲೆ ಶಿಗ್ಗಾಂವ ಪಟ್ಟಣದಲ್ಲಿ ಪವಿತ್ರ ರಂಜಾನ್ ಹಬ್ಬವನ್ನು ಮುಸ್ಲಿಂ ಬಾಂಧವರು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಿದರು. ಪಟ್ಟಣದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ರಂಜಾನ್ ಆಚರಿಸಿದರು. ರಂಜಾನ್ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಯಾಸೀರಖಾನ ಪಠಾಣ ಭಾಗವಹಿಸಿ, ಸಮಾಜ ಬಾಂಧವರಿಗೆ ಶುಭಾಶಯ ಕೋರಿದರು. ನಂತರ ಪರಸ್ಪರ ತಬ್ಬಿಕೊಂಡು ರಂಜಾನ್ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಸೋಮವಾರ ರೋಜಾವನ್ನು ಮುಕ್ತಾಯಗೊಳಿಸಿ ರಂಜಾನ್ ಹಬ್ಬವನ್ನು ಆಚರಿಸಿದರು. ರಂಜಾನ್ ಹಬ್ಬದ ಸಾಮೂಹಿಕ ಪ್ರಾರ್ಥನೆ ನಂತರ ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಮೆರವಣಿಗೆ ನಡೆಸಿ ರಂಜಾನ್ ಹಬ್ಬದ ಸಂಭ್ರಮ ಆಚರಿಸಿದರು. ಸೋಮವಾರ ಬೆಳಿಗ್ಗೆ ಒಂಬತ್ತು ಗ