ಬೆಂಗಳೂರು ಉತ್ತರ: ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್, 11 ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್
ನಮ್ಮ ಮೆಟ್ರೋದ 11 ನಿಲ್ದಾಣಗಳಲ್ಲಿ ಪಾರ್ಕಿಂಗ್ ಸೌಲಭ್ಯ ಹೆಚ್ಚಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಯೋಜನೆ ರೂಪಿಸಿದೆ. ಹಳದಿ ಮಾರ್ಗ ಆರಂಭವಾದ ನಂತರ ನಿತ್ಯ ಸಂಚರಿಸುವ ಮೆಟ್ರೋ ಪ್ರಯಾಣಿಕರ ಸಂಖ್ಯೆ 10 ಲಕ್ಷ ದಾಟಿದ್ದು, ನಿಲ್ದಾಣಗಳಲ್ಲಿ ವಾಹನ ನಿಲ್ಲಿಸುವುದಕ್ಕೆ ಜಾಗ ಸಿಗುತ್ತಿಲ್ಲ. ಸದ್ಯ ಹಸಿರು, ನೇರಳೆ ಮತ್ತು ಹಳದಿ ಮಾರ್ಗದ ಜನನಿಬಿಡ ನಿಲ್ದಾಣಗಳಲ್ಲಿ ಮತ್ತಷ್ಟು ಪಾರ್ಕಿಂಗ್ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ. ವಿಜಯನಗರ, ಜಯನಗರ, ಕುಂದಲಹಳ್ಳಿ, ನ್ಯಾಷನಲ್ ಕಾಲೇಜು, ಮೈಸೂರು ರಸ್ತೆ ಮೆಟ್ರೋ ನಿಲ್ದಾಣ, ಕಾಡುಗೋಡಿ ಟ್ರೀ ಪಾರ್ಕ್, ಜಯದೇವ ಮೆಟ್ರೋ ನಿಲ್ದಾಣ, ಹಂಪಿನಗರ, ಚಲ್ಲಘಟ್ಟ ಮೆಟ್ರೋ ನಿಲ್ದಾಣ, ಪೀಣ್ಯ ಕೈಗಾರಿಕಾ ಪ್ರದೇಶ, ಜೆ.ಪಿ. ನಗರ ಮೆಟ್ರೋ ನಿಲ್ದಾಣದಲ್ಲಿ ಹೆಚ್ಚುವರಿ ದ್ವಿಚಕ್ರ ವಾಹನ