ಹೊಸ ವರ್ಷದ ಹೊಸ್ತಿಲಲ್ಲಿ ಡ್ರಗ್ ವಿರುದ್ಧ ಮುಂದುವರೆದ ಪೊಲೀಸರ ಸಮರ, ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಭರ್ಜರಿ ಕಾರ್ಯಾಚರಣೆ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು ಸೇರಿ ಮೂವರನ್ನ ಬಾಗಲೂರು ಬಳಿ ಬುಧವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಬಂಧಸಲಾಗಿದೆ. ನೈಜೀರಿಯಾ ಮೂಲದ ಒಬಿಜೆಸಿ ಚಿಗೋಜೈ ದಾವಿ, ಸನಿ ಸಾದಿಕ್, ಬೆಂಗಳೂರಿನ ಮಹಮ್ಮದ್ ಮುಸ್ತಫಾ ಬಂಧಿತ ಆರೋಪಿಗಳು. ಬಾಗಲೂರು,ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ ಡಿಲೀಂಗ್ ನಲ್ಲಿ ತೊಡಗಿದ್ದ ಆರೋಪಿಗಳು. ಪರಿಚಯಸ್ಥರು, ವಿದ್ಯಾರ್ಥಿಗಳು, ಐಟಿಬಿಟಿ ಉದ್ಯೋಗಿಗಳಿಗೆ ಹೆಚ್ಚಿನ ಬೆಲೆಗೆ ಡ್ರಗ್ ಮಾರಾಟ ಮಾಡುತ್ತಿದ್ದರು ಎಂದು ತನುಖಾ ಹಂತದಲ್ಲಿ ತಿಳಿದುಬಂದಿದೆ.