ಹಿರಿಯೂರು: ಚಿತ್ರದುರ್ಗ: ಐಮಂಗಲ ಬಳಿ ಬೈಕ್ ಅಪಘಾತ - ನರ್ಸಿಂಗ್ ವಿದ್ಯಾರ್ಥಿ ಸಾವು
ಚಿತ್ರದುರ್ಗ ಜಿಲ್ಲೆಯ ಐಮಂಗಲದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಹೂವಿನಹಡಗಲಿ ಮೂಲದ ನರ್ಸಿಂಗ್ ವಿದ್ಯಾರ್ಥಿ ಸಂದೀಪ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿಗೆ ತೆರಳುತ್ತಿದ್ದಾಗ ಮುಂದಿದ್ದ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದಿದ್ದು, ಐಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.