ವಡಗೇರಾ: ಮಳೆಯಿಂದ ಹಾನಿಗೊಳಗಾದ ಗೋಡಿಹಾಳ ಗ್ರಾಮದ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾಧಿಕಾರಿಗಳು ಭೇಟಿ ಪರಿಶೀಲನೆ
ಮಳೆಯಿಂದ ಹಾನಿಗೊಳಗಾದ ಗೋಡಿಹಾಳ ಗ್ರಾಮದ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾಧಿಕಾರಿಗಳು ಭೇಟಿ ಪರಿಶೀಲನೆ ಜಿಲ್ಲೆಯಲ್ಲಿ ಮೂರು ದಿನಗಳಿಂದ ಸುರಿದ ಮಳೆ ಹಾಗೂ ಭೀಮಾ ನದಿಯ ಪ್ರವಾಹದಿಂದ ವಡಗೇರಾ ತಾಲೂಕಿನ ಗೋಡಿಹಾಳ ಗ್ರಾಮದ ಸುತ್ತಮುತ್ತಲಿನ ಗ್ರಾಮದ ಜಮೀನಿನಲ್ಲಿ ಜಲಾವೃತವಾದ ಹತ್ತಿ, ತೊಗರಿ, ಭತ್ತ, ಇತರ ಬೆಳೆಗಳನ್ನು ವೀಕ್ಷಿಸಿ ಅಧಿಕಾರಿಗಳಿಂದ ಸಮರ್ಪಕ ಮಾಹಿತಿ ಪಡೆದುಕೊಂಡು ಅವರ ಸೂಕ್ತ ರೀತಿಯಲ್ಲಿ ಬೆಳೆ ಹಾನಿ ಸಮೀಕ್ಷೆ ಕೈಗೊಳ್ಳುವಂತೆ ಕಂದಾಯ ಮತ್ತು ಕೃಷಿ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳು ಜಿಲ್ಲಾಮಟ್ಟದ ಅಧಿಕಾರಿಗಳು ರೈತರು ಭಾಗವಹಿಸಿದ್ದರು