ಸತೀಶ್ ಜಾರಕಿಹೊಳಿ ಅವರ ಡಿನ್ನರ್ ನಲ್ಲಿ ರಾಜಕೀಯ ಇಲ್ಲ ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಅವರು ಹೇಳಿದರು. ಬೆಳಗಾವಿ ಚಳಿಗಾಲ ಅಧಿವೇಶನ ನಡೆಯುತ್ತಿದ್ದು, ಬೇರೆ ಬೇರೆ ಕಡೆಯಿಂದ ಸಚಿವರು ಆಗಮಿಸಿರುತ್ತಾರೆ. ಅಂತಹ ಸಂದರ್ಭದಲ್ಲಿ ಬನ್ನಿ ಡಿನ್ನರ್ ಮಾಡೋಣ ಎಂದು ಆಹ್ವಾನಿಸಿರುವುದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಹೇಳಿದರು ಗುರುವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಆತ್ಮೀಯರಿಗೆ ಡಿನ್ನರ್ ಪಾರ್ಟಿ ಕೊಟ್ಟಿದ್ದರಲ್ಲಿ ತಪ್ಪೇನಿಲ್ಲ ಎಂದು ಸಮರ್ಥಿಸಿಕೊಂಡರು.