ಶಿವಮೊಗ್ಗ: ಜಾವಗಟ್ಟಿ ಬಳಿ ಭೀಕರ ರಸ್ತೆ ಅಪಘಾತ ಸ್ಥಳದಲ್ಲೇ ಸಾವು
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಜಾವಗಟ್ಟಿಯ ಬಳಿ ದೇವಿಕೊಪ್ಪ ಕೆರೆ ಏರಿಯಾ ಮೇಲೆ ಕಾರು ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬುಧವಾರ ಜರುಗಿದೆ. ಆಲವಟ್ಟಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗ ಕಡೆಯಿಂದ ಶಿರಾಳಕೊಪ್ಪ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿತು. ಈ ಅಪಘಾತದಲ್ಲಿ ಕಾರು ಚಾಲಕ ಸಾವನ್ನಪ್ಪಿದ್ದಾನೆ ಅಲ್ಲದೇ ಅಪಘಾತದ ಅರಭಸಕ್ಕೆ ಖಾಸಗಿ ಬಸ್ ಪಲ್ಟಿಯಾಗಿದ್ದು, ಬಸ್ನಲ್ಲಿದ್ದ 15 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನ ಶಿರಾಳಕೊಪ್ಪದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.