ಮಳವಳ್ಳಿ: ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಪ್ರಕರಣ ಖಂಡಿಸಿ ಪಟ್ಟಣದಲ್ಲಿ ವಕೀಲರ ಪ್ರತಿಭಟನೆ
ಮಳವಳ್ಳಿ : ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದ ಘಟನೆಯನ್ನು ಖಂಡಿಸಿ ಮಳವಳ್ಳಿ ಪಟ್ಟಣದಲ್ಲಿ ಸಹ ವಕೀಲರು ನ್ಯಾಯಾಲಯದ ಕಲಾಪಗಳಿಂದ ಹೊರಗುಳಿದು ಪ್ರತಿಭಟನೆ ನಡೆಸಿದರು. ಬುಧವಾರ ನ್ಯಾಯಾಲಯದ ಕಲಾಪದಿಂದ ಹೊರಗುಳಿದ ವಕೀಲರು ಮಧ್ಯಾಹ್ನ 1.30 ರ ಸಮಯದಲ್ಲಿ ತೋಳಿಗೆ ಕಪ್ಪು ಪಟ್ಟಿ ಧರಸಿ ನ್ಯಾಯಾಲಯದ ಮುಂದೆ ನೆರೆದು ತಮ್ಮ ಪ್ರತಿಭಟನಾ ಪ್ರದರ್ಶನ ನಡೆಸಿ ದರು. ಈ ವೇಳೆ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ಡಿ ಎಂ ಸುಂದರ್ ಅವರು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯ ಮೂರ್ತಿಗಳ ಮೇಲೆ ಅದೂ ಕೋರ್ಟ್ ಕಲಾಪದ ವೇಳೆ ಶೂ ಎಸೆದಿರುವ ಘಟನೆ ಇಡೀ ನ್ಯಾಯಾಂಗ ವ್ಯವಸ್ಥೆ ಮೇಲೆ ನಡೆದ ದಾಳಿಯಾಗಿದೆ ಎಂದು ಘಟನೆಯನ್ನು ಖಂಡಿಸಿದರು.