ಕಾರವಾರ: ನಗರದ ಡಿಸಿ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ವಿವಿಧ ಸಮಿತಿಗಳ ಸಭೆ ನಡೆಯಿತು
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಸಂಜೆ 4ಕ್ಕೆ ನಡೆದ ಸಭೆಯಲ್ಲಿ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ವಹಿಸಿ ಜಿಲ್ಲೆಯಲ್ಲಿನ ಶಾಲೆಗಳು ಮತ್ತು ಕಾಲೇಜುಗಳ 100 ಮೀ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ, ಪ್ರದರ್ಶನ ಮತ್ತು ಸೇವನೆ ನಡೆಯದಂತೆ ಕಟುನಿಟ್ಟಿನ ಎಚ್ಚರವಹಿಸಿ ಇದನ್ನು ಉಲ್ಲಂಘಿಸುವವರ ವಿರುದ್ದ ಕೋಟ್ಪಾ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ನಗರಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.