ದೊಡ್ಡಬಳ್ಳಾಪುರ: ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಕುರಿತು ಸಿಎಂಗೆ ಮನವಿ ಸಲ್ಲಿಸಲು ಕರವೇ ಯಿಂದ ಸಿದ್ದತೆ ಮಾಡಲಾಗಿದೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಕರವೇ
ದೊಡ್ಡಬಳ್ಳಾಪುರ ಅಕ್ಟೋಬರ್ 19ರಂದು ದೊಡ್ಡಬಳ್ಳಾಪುರಕ್ಕೆ ಮುಖ್ಯಮಂತ್ರಿಗಳ ಆಗಮನ ಹಿನ್ನೆಲೆಯಲ್ಲಿ ಕರವೇ ಕನ್ನಡಿಗರ ಬಡವತಿಯಿಂದ ಮನವಿ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ ಎಂದರು ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಬಣದ ವತಿಯಿಂದ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಜಾಲಪ್ಪ ಅವರ ಜನ್ಮ ಶತಮಾನೋತ್ಸವ ಸಮಾರಂಭಕ್ಕೆ ಮುಖ್ಯ ಮಂತ್ರಿಗಳು ಆಗಮಿಸುತ್ತಿದ್ದು ನಗರದ ಬಸ್ ನಿಲ್ದಾಣವನ್ನು ಪುನಃ ಸ್ಥಾಪಿಸಬೇಕು ಎಂದು ಮನವಿ ಸಲ್ಲಿಸಲಾಗುವುದು ಎಂದರು