ಸಂಡೂರು: 30 ವರ್ಷ ಮೇಲ್ಪಟ್ಟವರು ಪ್ರತಿ 6 ತಿಂಗಳಿಗೊಮ್ಮೆ ರಕ್ತದೊತ್ತಡ, ಸಕ್ಕರೆ ಕಾಯಿಲೆ ಪರೀಕ್ಷಿಸಿಕೊಳ್ಳಿ, ವಿಠ್ಠಲಾಪುರದಲ್ಲಿ ಡಿಹೆಚ್ಓ
30 ವರ್ಷ ಮೇಲ್ಪಟ್ಟವರು ಪ್ರತಿ 6 ತಿಂಗಳಿಗೊಮ್ಮೆ ರಕ್ತದೊತ್ತಡ, ಸಕ್ಕರೆ ಕಾಯಿಲೆ ಪರೀಕ್ಷೆ ಮಾಡಿಸುವ ಮೂಲಕ ಸದೃಢ ಆರೋಗ್ಯ ಹೊಂದಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು. ಡಿ.5ಶುಕ್ರವಾರ ಮಧ್ಯಾಹ್ನ 12ಕ್ಕೆ, ಸಂಡೂರು ತಾಲ್ಲೂಕಿನ ವಿಠಲಾಪುರ ಮತ್ತು ಮೆಟ್ರಿಕಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು. ಯಾರಿಗಾದರೂ ಬಾಯಿ ಒಣಗಿದಂತೆ ಆಗುವುದು ಅಥವಾ ವಿಪರೀತ ಬಾಯಾರಿಕೆ, ಪದೇ ಪದೇ ಮೂತ್ರ ವಿಸರ್ಜನೆ, ಹಸಿವು ಹೆಚ್ಚಾಗುವುದು, ಮಂದದೃಷ್ಟಿ ಕಾರಣವಿಲ್ಲದೇ ಆಯಾಸ ಕಂಡುಬAದಲ್ಲಿ ತಕ್ಷಣ ವೈದ್ಯರ ಬಳಿ ತೆರಳಿ ಪರಿಕ್ಷೀಸಿಕೊಳ್ಳಬೇಕು. 30 ವರ್ಷ ಮೇಲ್ಪಟ್ಟವರು ಪ್ರತಿ 6 ತಿ