ಶಿರಸಿ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಹೆಗಡೆಕಟ್ಟಾ ಗ್ರಾಮ ಪಂಚಾಯತ ಎದುರು ಪ್ರತಿಭಟನೆ
ಶಿರಸಿ: ರಾಜ್ಯ ಸರಕಾರದ ಪ್ರತಿ ವ್ಯವಸ್ಥೆಯಲ್ಲಿಯೂ ಭ್ರಷ್ಟಾಚಾರ ತಾಂಡವವಾಡುತ್ತಿರುವುದರಿಂದ ಜನ ಸಾಮಾನ್ಯರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಆರೋಪಿಸಿ, ಬಿಜೆಪಿ ಗ್ರಾಮೀಣ ಮಂಡಳದ ವತಿಯಿಂದ ತಾಲೂಕಿನ ಹೆಗಡೆಕಟ್ಟಾ-ಶಿವಳ್ಳಿ ಗ್ರಾಪಂ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಂಡು ಗ್ರಾಪಂ ಅಭಿವೃದ್ಧಿ ಅಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ನಿವೇಶನಗಳ ಸಮಸ್ಯೆ, ಅಕ್ರಮ-ಸಕ್ರಮ ಅರ್ಜಿ ತಿರಸ್ಕರಿಸಿರುವುದು, ಹೊಸ ಆಶ್ರಯ ಮನೆಗಳ ಮಂಜೂರಾತಿ, ವೃದ್ಧಾಪ್ಯ, ವಿಧವಾ ವೇತನ, ಗ್ರಾಮೀಣ ರಸ್ತೆಗಳ ದುರಸ್ತಿ, ನಿರಂತರ ವಿದ್ಯುತ್ ಪೂರೈಕೆಗೆ ಆಗ್ರಹಿಸಲಾಯಿತು.