ಬೆಂಗಳೂರು ಉತ್ತರ: ಸಿಎಂ ಸಿದ್ದರಾಮಯ್ಯಗೆ ಶಾಲು ಹೊದಿಸಿ ಸ್ವಾಗತಿಸಿದ ಉಪ ಮುಖ್ಯಮಂತ್ರಿ ಡಿಕೆಶಿ
ಮಂಗಳವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿದರು. ಮುಖ್ಯಮಂತ್ರಿ ಕುರ್ಚಿ ಬದಲಾವಣೆ ಕುರಿತು ಹೈಕಮಾಂಡ್ ಮಾತುಕತೆ ನಡೆಸಿದ ಬೆನ್ನಲ್ಲೇ ಈ ಭೇಟಿ ನಡೆದಿದೆ. ಭಾನುವಾರ ದೆಹಲಿಯಲ್ಲಿ ಸೋನಿಯಾ ಗಾಂಧಿ ನಿವಾಸದಲ್ಲಿ ನಡೆದ ಸಭೆಯ ನಂತರ, ಹೈಕಮಾಂಡ್ ಎಚ್ಚರಿಕೆ ಹೆಜ್ಜೆ ಇಟ್ಟಿದೆ. ಈ ಉಪಹಾರ ಕೂಟವು ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.