ಗಡಿನಾಡು ಕೆಜಿಎಫ್ ನಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ. ಕನ್ನಡದ ಎತ್ತಿನ ಬಂಡಿ ಓಡಿಸಿದ ಶಾಸಕಿ ರೂಪಕಲಾ ಶಶಿಧರ್ ಕೆಜಿಎಫ್ ಕಾಂಗ್ರೇಸ್ ಶಾಸಕಿ ರೂಪಕಲಾ ಶಶಿಧರ್ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಹಿನ್ನಲೆ ಶನಿವಾರ ಬೆಳಗ್ಗೆ 11 ಗಂಟೆಯಲ್ಲಿ ಎತ್ತಿನ ಬಂಡಿ ಓಡಿಸಿ ಸ್ಥಬ್ದಚಿತ್ರಗಳ ಮೆರವಣಿಗೆಗೆ ಚಾಲನೆ ನೀಡಿದ್ದಾರೆ ಪುರಸಭಾ ಮೈದಾನದಿಂದ ಸೂರಜ್ ಮುಲ್ ಸರ್ಕಲ್ ವರೆಗೆ ಎತ್ತಿನ ಬಂಡಿ ಓಡಿಸಿದ್ದಾರೆ ನಂತರ ಮಾತನಾಡಿರುವ ಅವರು ಗಡಿಭಾಗದಲ್ಲಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ನಮ್ಮದಾಗಿದೆ ಎಂದು ತಿಳಿಸಿದ್ದಾರೆ