ಮಳವಳ್ಳಿ: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸಭಾಂಗಣದಲ್ಲಿ ನಡೆದ ಪೋಷಣ ಮಾಸಾಚರಣೆ ಹಾಗೂ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನಕ್ಕೆ ಚಾಲನೆ
ಮಳವಳ್ಳಿ: ಮನೆಗೆ ಸೀಮಿತವಾ ಗಿದ್ದ ಮಹಿಳೆ ಪ್ರಸ್ತುತ ಎಲ್ಲಾ ರಂಗ ದಲ್ಲಿಯೂ ಸಾಧನೆ ಮಾಡುವುದರ ಜೊತೆಗೆ ಪುರುಷರಷ್ಟೆ ಸಮಾನಾಗಿ ನಿಂತಿದ್ದಾರೆ ಎಂದು ತಹಶೀಲ್ದಾರ್ ಡಾ ಎಸ್.ವಿ.ಲೋಕೇಶ್ ತಿಳಿಸಿ ದ್ದಾರೆ ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ಕೇಂದ್ರ ಸಂವಹನ ಇಲಾಖೆ, ತಾಲ್ಲೂಕು ಆಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗ ದೊಂದಿಗೆ ಬುಧವಾರ ಸಾಯಂಕಾಲ 4.30 ರ ಸಮಯದಲ್ಲಿ ಆಯೋಜಿಸಿದ್ದ ಪೋಷಣ ಮಾಸಾಚರಣೆ ಹಾಗೂ ಸ್ವಸ್ಥನಾರಿ ಸಶಕ್ತ ಪರಿವಾರ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.