ಹಾಸನ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಖೋ ಖೋ ಪಂದ್ಯ ಮುಗಿದ ನಂತರ ವಿದ್ಯಾರ್ಥಿಗಳ ಮಾರಾಮಾರಿ
Hassan, Hassan | Sep 15, 2025 ಹಾಸನ : ವಿದ್ಯಾರ್ಥಿಗಳು ಖೋ-ಖೋ ಪಂದ್ಯಾವಳಿ ಮುಗಿದ ವೇಳೆ ಪರಸ್ಪರ ಬಡಿದಾಡಿಕೊಂಡಿರುವ ಘಟನೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದೆ.ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಿಯು ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆಖೋ-ಖೋ ಪಂದ್ಯ ಮುಗಿದ ನಂತರ ಕ್ಷುಲ್ಲಕ ಕಾರಣಕ್ಕೆ ಬಡಿದಾಟ ಮಾಡಿಕೊಂಡಿದ್ದು, ಆಯೋಜಕರ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಪ್ರತಿನಿತ್ಯ ಗಲಾಟೆಗಳಾಗುತ್ತಿವೆ, ಪುಂಡರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಇದರಿಂದ ವಯೋವೃದ್ಧರು ವಾಕ್ ಮಾಡುವುದೇ ಕಷ್ಟವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಇನ್ನೂ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದಾರೆ.