ಹಾವೇರಿ: ಹಾನಗಲ್: ಆಡೂರು ಪೊಲೀಸ್ ಠಾಣೆಯಲ್ಲಿ ಅದ್ದೂರಿಯಾಗಿ ನಡೆದ ಆಯುಧ ಪೂಜೆ
Haveri, Haveri | Oct 20, 2026 ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಆಡೂರು ಪೊಲೀಸ್ ಠಾಣೆಯಲ್ಲಿ ದಸರಾ ಹಬ್ಬದ ಅಂಗವಾಗಿ ಆಯುಧ ಪೂಜೆ ನಡೆಯಿತು. ಪೊಲೀಸ್ ಠಾಣೆಯಲ್ಲಿದ್ದ ಬಂದೂಕು ಮತ್ತು ಆಯುಧಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪಿಎಸ್ಐ ಕುಮಾರ್ ಕುರುಗುಂದ ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.