ಮಾಲೂರು: ಮಾಲೂರು ಕಾಂಗ್ರೆಸ್ ಕಚೇರಿಯಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಸಂವಿಧಾನ ಸಮರ್ಪಣ ದಿನಾಚರಣೆ
Malur, Kolar | Nov 26, 2025 ಮಾಲೂರು ಕಾಂಗ್ರೆಸ್ ಕಚೇರಿಯಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಸಂವಿಧಾನ ಸಮರ್ಪಣ ದಿನಾಚರಣೆ ಮಾಲೂರು ನಗರದ ತಾಲ್ಲೂಕು ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಬೆಳ್ಳಿಗೆ 10:30 ರ ಸಮಯದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾಲೂರು ತಾಲ್ಲೂಕಿನ ಶಾಸಕ ಕೆ. ವೈ ನಂಜೇಗೌಡ ಭಾಗವಹಿಸಿ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಮಹಾತ್ಮಾ ಗಾಂಧೀಜಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು. ನಂತರ ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡಿ, ಬಾಕಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡಲು ಸೂಕ್ತ ಕ್ರಮ ಜರುಗಿಸಲು ಅಧಿಕಾರಿಗಳಿಗೆ ಸೂಚಿಸಿದರು.