ಚಳ್ಳಕೆರೆ:-ತಾಲೂಕಿನ ಬುಕ್ಕಂಬೂದಿ ಗ್ರಾಮದಲ್ಲಿ ಶಾಸಕ ಎನ್ ವೈ ಗೋಪಾಲಕೃಷ್ಣ ಸಸಿ ಮರದಿಂದ ಬುಕ್ಕಂಬೂದಿ ರಸ್ತೆ ಸಂಪರ್ಕಿಸುವ ಒಂದುವರೆ ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಶುಕ್ರವಾರ ಭೂಮಿ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು,ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ. ಉತ್ತಮ ಕೆಲಸ ಆಗಬೇಕು ಎಂದು ಸಂಬಂಧಪಟ್ಟ ಗುತ್ತಿಗೆದಾರರು, ಎಂಜಿನಿಯರ್ಗಳಿಗೆ ಸೂಚಿಸಿದರು.ಗ್ರಾಮೀಣ ಭಾಗದಲ್ಲಿ ಇಷ್ಟು ದಿನ ಸಾರ್ವಜನಿಕರು ತೊಂದರೆ ಅನುಭವಿಸಿದ್ದಾರೆ. ಇನ್ನು ಹಾಗಾಗದಂತೆ ಕ್ರಮವಹಿಸಲಾಗುವುದು. ಆದಷ್ಟು ಬೇಗ ಸಂಚಾರ ಯೋಗ್ಯ ರಸ್ತೆಗಳನ್ನಾಗಿ ಮಾಡಲಾಗುವುದು.