ಕೊಪ್ಪಳ: ದಲಿತ ವಿಮೋಚನಾ ಮಾನವ ಹಕ್ಕುಗಳ ವೇದಿಕೆಯ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಪೂಜಾರ ನೇತೃತ್ವದಲ್ಲಿ ಶಾಸಕ ಬಸನಗೌಡನ ವಿರುದ್ಧ ನಗರದಲ್ಲಿದೂರು ದಾಖಲು
Koppal, Koppal | Sep 16, 2025 ದಲಿತ ವಿಮೋಚನಾ ಮಾನವ ಹಕ್ಕುಗಳ ವೇದಿಕೆಯ ಕೊಪ್ಪಳ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಪೂಜಾರ ನೇತೃತ್ವದಲ್ಲಿ ಉಚ್ಚಾಟಿತ ಬಿಜೆಪಿ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಕ್ರಮಕೈಗೊಳ್ಳಲು ಒತ್ತಾಯಿಸಿದ್ದಾರೆ. ಸೆಪ್ಟೆಂಬರ್ 16 ರಂದು ಸಂಜೆ 7-00 ಗಂಟೆಗೆ ಮಲ್ಲಿಕಾರ್ಜುನ ಪುಜಾರ ಮಾಧ್ಯಮಕ್ಕೆ ಮಾಹಿತಿ ನೀಡುವ ಮೂಲಕ ದಲಿತ ವಿರೋಧಿ ಹೇಳಿಕೆ ಯನ್ನು ಬಸನಗೌಡ ಪಾಟೀಲ ಯತ್ನಾಳ ನೀಡಿದ್ದಾರೆ ಆದ್ದರಿಂದ ಅವರ ವಿರುದ್ಧ ದೂರು ನೀಡಿ ಜೈಲಿಗೆ ಕಳುಹಿಸಲು ಒತ್ತಾಯ ಮಾಡಿರುವುದಾಗಿ ಹೇಳಿದರು