ಸೋಮವಾರ ಮಧ್ಯಾಹ್ನ 1.30ಕ್ಕೆ ಮಾಧ್ಯಮದವರೊಂದಿಗೆ ಮಾತನಾಡಿದ ಎಂಎಲ್ಸಿ ಶಾಂತಾರಾಮ ಸಿದ್ದಿ ಒತ್ತಾಯ ಮುಂಬರುವ ದಿನಗಳಲ್ಲಿ ಪರಿಶಿಷ್ಟ ಪಂಗಡದಲ್ಲಿಯೂ ಒಳ ಮೀಸಲಾತಿ ಜಾರಿಯಾಗಲಿ ಎಂದು ಶಾಂತಾರಾಂ ಸಿದ್ದಿ ಸರ್ಕಾರವನ್ನು ಒತ್ತಾಯಿಸಿದರು. 2024 ಆಗಸ್ಟ್ 1ರಂದು ಸುಪ್ರಿಂ ಕೋರ್ಟನ ಏಳು ಸದಸ್ಯರ ಸಂವಿಧಾನ ಪೀಠ ಒಳ ಮೀಸಲಾತಿ ಬಗ್ಗೆ ಐತಿಹಾಸಿಕ ತೀರ್ಪು ನೀಡಿದ್ದು, ಅದನ್ನು ಅನುಷ್ಠಾನ ಮಾಡುವ ಹೊಣೆ ರಾಜ್ಯ ಸರ್ಕಾರದ ಮೇಲಿದ್ದು ಅದನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿದರು.