ಜಮಖಂಡಿ: ನಗರದಲ್ಲಿ ಯಶಸ್ವಿಯಾಗಿ ಜರುಗಿದ ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಕಾರ್ಯಕ್ರಮ
ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲಾ ವಿಭಾಗ)ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಾಗಲಕೋಟೆ, ತಾಲೂಕು ಕಾನೂನು ಸೇವಾ ಸಮಿತಿ ಜಮಖಂಡಿ, ನ್ಯಾಯವಾದಿಗಳ ಸಂಘ ಜಮಖಂಡಿ ಅಭಿಯೋಜಕರ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಮಖಂಡಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಜಮಖಂಡಿ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.