ಸಾರ್ವಜನಿಕರು ಮೊಬೈಲ್ ಕಳೆದುಕೊಂಡ ಕುರಿತು ಪ್ರಕರಣ ದಾಖಲದ ಕೆಲವೇ ಗಂಟೆಗಳಲ್ಲಿ ಪೊಲೀಸರು ಪತ್ತೆಹಚ್ಚಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟೆ ಅವರ ನಿರ್ದೇಶನದ ಮೇರೆಗೆ ಸಿಸಿ ಕ್ಯಾಮೆರಾ ಹಾಗೂ ಪೋರ್ಟಲ್ ಸಹಾಯದಿಂದ ಪಿಎಸ್ಐ ಸವಿತಾ ಪ್ರಿಯಾಂಕ, ಸಿಬ್ಬಂದಿ ಕಳೆದುಹೋದ ಮೊಬೈಲ್ ಅನ್ನ ಪತ್ತೆಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ಗುರುವಾರ ತಿಳಿಸಲಾಗಿದೆ.