ನಂಜನಗೂಡು: ನಗರದ ಕಪಿಲಾ ನದಿಯಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು
ನಂಜನಗೂಡು: ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಸಮೀಪದಲ್ಲಿರುವ ಕಪಿಲ ನದಿಯಲ್ಲಿ ಸ್ನಾನ ಮಾಡಲು ಹೋದ ವ್ಯಕ್ತಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ಮಂಗಳವಾರ ನಡೆದಿದೆ.ಚಾಮರಾಜನಗರ ತಾಲೂಕಿನ ಅಂಕಶಟ್ಟಿಪುರ ಗ್ರಾಮದ 53 ವರ್ಷದ ಗುರುಸ್ವಾಮಿ ಮೃತ ವ್ಯಕ್ತಿಯಾಗಿದ್ದಾನೆ. ಈತ ಖಾಸಗಿ ಬಸ್ ವೊಂದರಲ್ಲಿ ಕ್ಲಿನರ್ ಕೆಲಸ ಮಾಡಿಕೊಂಡಿದ್ದ. ಶ್ರೀ ನಂಜುಂಡೇಶ್ವರ ದೇವಾಲಯಕ್ಕೆ ಆಗಮಿಸಿ ಕಪಿಲ ನದಿಯಲ್ಲಿ ಸ್ನಾನ ಮಾಡಲು ತೆರಳಿದ ವೇಳೆ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ.