ಮೃಗಾಲಯದಲ್ಲಿ ಪ್ರಾಣಿಗಳ ಆರೈಕೆ ಮಾಡುವಾಗ ಪ್ರಾಣಿಗಳಿಗೆ ಆಹಾರ ಹಾಕುವಾಗ ಜಾಗೃತಿ ವಹಿಸಿ ತಮ್ಮನ್ನು ಕೂಡ ರಕ್ಷಣೆ ಮಾಡಿಕೊಳ್ಳಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು. ನಗರದ ಆಡು ಮಲ್ಲೇಶ್ವರ ಕಿರು ಮೃಗಾಲಯದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು. ಅನಿವಾರ್ಯ ಸಂದರ್ಭದಲ್ಲಿ ಪ್ರಾಣಿಗಳು ಕಚ್ಚಿದಾಗ ಪರಚಿದಾಗ ಬೇಜವಾಬ್ದಾರಿತನ ಮಾಡದೆ ಸೋಪು ನೀರಿನಿಂದ ಪರಚಿದ ಭಾಗ ಸ್ವಚ್ಛಗೊಳಿಸಬೇಕು. ಯಾವುದೇ ತರಹದ ಬ್ಯಾಂಡೇಜ್ ಕಟ್ಟಬಾರದು. ತಕ್ಷಣ ವೈದ್ಯರಲ್ಲಿ ಪರೀಕ್ಷೆ ಮತ್ತು ಚಿಕಿತ್ಸೆ ಪಡೆಯುವ ಮುಖಾಂತರ ನಮ್ಮನ್ನು ನಾವು ರಕ್ಷಿಸಿಕೊಳ್ಳಬೇಕೆಂದು ತಿಳಿಸಿದರು.