ಮಳವಳ್ಳಿ: ತಾಲ್ಲೂಕಿನ ದೊಡ್ಡೇಗೌಡನ ಕೊಪ್ಪಲು ಗ್ರಾಮದಲ್ಲಿ ಶಾಸಕರ ಹೇಳಿಕೆ, ಮಾಜಿ ಶಾಸಕರ ಆರೋಪಕ್ಕೆ ತಿರುಗೇಟು ನೀಡಿದ ನರೇಂದ್ರಸ್ವಾಮಿ
ಮಳವಳ್ಳಿ : ತಾಲ್ಲೂಕಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳ ನಾಗಾಲೋಟವನ್ನು ಸಹಿಸದ, ಅಭಿವೃದ್ಧಿಯ ಅರ್ಥವನ್ನೇ ಅರಿಯದ ವಿರೋಧಿಗಳು ಇಲ್ಲಸಲ್ಲದ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಆದ ಶಾಸಕ ಪಿ ಎಂ ನರೇಂದ್ರಸ್ವಾಮಿ ಅವರು ಹೆಸರೇಳದೆಯೇ ಮಾಜಿ ಶಾಸಕರಾದ ಅನ್ನದಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಳವಳ್ಳಿ ತಾಲ್ಲೂಕಿನ ದೊಡ್ಡೇಗೌಡನ ಕೊಪ್ಪಲು ಗ್ರಾಮದಲ್ಲಿ ಸುಮಾರು 5 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಳ್ಳಲಿ ರುವ ನೂತನ ಮೌಲಾನ ಅಜಾದ್ ಮಾದರಿ ಶಾಲೆಯ ಕಟ್ಟಡಕ್ಕೆ ಶನಿವಾರ ಮಧ್ಯಾಹ್ನ 3.30 ರ ಸಮಯದಲ್ಲಿ ಶಂಕುಸ್ಥಾಪನೆ ನೆರವೇರಿಸಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.