ಶಿವಮೊಗ್ಗ: ಶಿವಮೊಗ್ಗದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ವೀಕ್ಷಸಿದ ಶಾಸಕ ಚನ್ನಬಸಪ್ಪ
ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆಯ ಸಮೀಪದ ಮೇಲ್ಸೇತುವೆ ಹತ್ತಿರ ಆರಂಭಗೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯ ಸ್ಥಳಕ್ಕೆ ಶಾಸಕ ಎಸ್.ಎನ್.ಚನ್ನಬಸಪ್ಪ ಸೋಮವಾರ ಮಧ್ಯಾಹ್ನ 2 ಗಂಟೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಸಂಚಾರ ಸುಗಮವಾಗಲು ಮತ್ತು ನಾಗರಿಕರಿಗೆ ಉತ್ತಮ ಮೂಲಸೌಕರ್ಯ ಒದಗಿಸಲು ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿಯ ಗುಣಮಟ್ಟ, ಗುರಿಯಂತೆ ಪೂರ್ಣಗೊಳ್ಳುವ ಸಮಯ ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಅಧಿಕಾರಿಗಳೊಂದಿಗೆ ಈ ವೇಳೆ ಚರ್ಚಿಸಿದರು.