ಸರಗೂರು ಪಟ್ಟಣದ ಪೊಲೀಸ್ ಠಾಣೆ ಮುಂಭಾಗದಲ್ಲಿ ಶನಿವಾರ ಬೆಳಿಗ್ಗೆ ೧೧ ರ ವೇಳೆಯಲ್ಲಿ ಯುಗಾದಿ ಹಬ್ಬದ ಅಂಗವಾಗಿ ನಡೆಯುವ ಹಾಲುಗಡ ಮತ್ತು ಇಟ್ನಾ ಚಿಕ್ಕದೇವಮ್ಮನ ಜಾತ್ರಾ ಮಹೋತ್ಸವದ ಅಂಗವಾಗಿ ಏಪ್ರಿಲ್ 09 ರಿಂದ 11ವರಗೆ ಮೂರು ದಿನಗಳು ನಡೆಯಲಿರುವ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಗ್ರಾಮದ ಮುಖಂಡರು ವೃತ್ತ ನಿರೀಕ್ಷಕ ಲಕ್ಷ್ಮೀಕಾಂತ್ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ನಂತರ ಮಾತನಾಡಿದ ಅವರು ಜಾತ್ರಾ ಸಿದ್ದತೆಯ ಬಗ್ಗೆ ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿ ಹಾಗೂ ಇಟ್ನ ಗ್ರಾಮಸ್ಥರು ಕರೆದು ಜನರ ಧಾರ್ಮಿಕ ಭಾವನೆಗಳಿಗೆ ತೊಂದರೆ ಆಗದ ರೀತಿ ಅಧಿಕಾರಿಗಳು ಸಹಕಾರದೊಂದಿಗೆ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಬೇಕು ಹಾಗೂ ಜಾತ್ರೆ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.