ಕಲಬುರಗಿ: ಅನಾರೋಗ್ಯದ ನಡುವೆಯೂ ಜನರ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಚಿಂತನೆ: ನಗರದಲ್ಲಿ ಸಚಿವ ಶರಣಪ್ರಕಾಶ ಪಾಟೀಲ್
ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಸಚಿವ ಶರಣಪ್ರಕಾಶ ಪಾಟೀಲ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಖರ್ಗೆ ಅವರ ಆರೋಗ್ಯ ಸ್ಥಿರವಾಗಿದ್ದು, ಶೀಘ್ರ ಗುಣಮುಖರಾಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಯಾರೂ ಭಯಪಡುವ ಅಗತ್ಯವಿಲ್ಲ, ಖರ್ಗೆ ಸಾಹೇಬರು ತಮ್ಮ ಅನಾರೋಗ್ಯದ ನಡುವೆಯೂ ಜನರ ಕಲ್ಯಾಣದ ಕುರಿತು ಚಿಂತಿಸಿದ್ದಾರೆ. ನಮ್ಮ ಭಾಗದ ಪ್ರವಾಹ ಪರಿಸ್ಥಿತಿ ಹಾಗೂ ಪರಿಹಾರ ಕಾರ್ಯಗಳ ಕುರಿತು ನನ್ನಿಂದ ಮಾಹಿತಿ ಪಡೆದಿದ್ದಾರೆ. ಇಂತಹ ಮಾನವೀಯ ಗುಣದಿಂದಲೇ ಅವರು ನಾಡಿನ ಜನರ ಪ್ರೀತಿ ಗಳಿಸಿದ್ದಾರೆ ಎಂದು ಬುಧವಾರ 6 ಗಂಟೆಗೆ ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ.