ಕರ್ನಾಟಕ, ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಸೇರಿದಂತೆ 8 ಜಿಲ್ಲೆಗಳ 6 ಲಕ್ಷ ಎಕರೆ ಕೃಷಿ ಪ್ರದೇಶಕ್ಕೆ ನೀರು ಒದಗಿಸುವ, ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಹೊಸ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಆರಂಭವಾಗಿದೆ. ಆದರೇ ಚೈನ್ ಲಿಂಕ್ ಬದಲಾವಣೆ ಯಾವಾಗ ಎಂಬ ಪ್ರಶ್ನೆಯನ್ನು ರೈತರು ಕೇಳುತ್ತಿದ್ದಾರೆ. 19 ನೇ ಕ್ರಸ್ಟ್ ಗೇಟ್‌ನ ಚೈನ್ ಲಿಂಕ್ ಕಟ್ ಆಗಿ ಗೇಟ್ ಕೊಚ್ಚಿಕೊಂಡು ಹೋಗಿ ಅನಾಹುತ ಸಂಭವಿಸಿತ್ತು. ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ತುಂಗಭಧ್ರ ಜಲಾಶಯದ ಶಿಥಿಲಗೊಂಡ ಎಲ್ಲಾ ಕ್ರೆಸ್ಟ್ ಗೇಟ್‌ಗಳ ಬದಲಾವಣೆ ಕಾರ್ಯಕ್ಕೆ ಮುಂದಾಗಿದೆ. ಇದೀಗ ಗೇಟ್ ಅಳವಡಿಕೆಗೆ ಗುಜರಾತ್ ಅಹಮದಾಬಾದ್ ಮೂಲದ ಹಾರ್ಡ್ವೇರ್ ಟೂಲ್ಸ್ ಅಂಡ್ ಮೆಷಿನರಿ ಪ್ರೊಜೆಕ್ಟ್ ಕಂಪನಿ ಕೆಲಸ ಆರಂಭಿಸಿದೆ. 105 ಟಿಎಂಸಿ ಸಾಮರ್ಥ್ಯದ ತುಂಗಭದ್ರಾ