ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ಹೋಗುವ ವಿಚಾರಕ್ಕೆ ಸಂಬಂಧಿಸಿ ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ವಿಧಾನಸೌಧದ ಬಳಿ, ಅಧಿವೇಶನ ಹಾಗೂ ಬಜೆಟ್ ಸಿದ್ಧತೆ ಕುರಿತಂತೆ ಸ್ಪಷ್ಟನೆ ನೀಡಿದ್ದು, ದೆಹಲಿಗೆ ಯಾವಾಗ ಹೋಗ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ, ಹೈಕಮಾಂಡ್ ಕರೆದ್ರೆ ಹೋಗ್ತೇನೆ ಎಂದು ಸರಳವಾಗಿ ಉತ್ತರಿಸಿದರು. ಇನ್ನು ಬಜೆಟ್ ಸಿದ್ಧತೆ ಕುರಿತ ಸಭೆ ಬಗ್ಗೆ ಮಾತನಾಡಿದ ಅವರು, ಫೆಬ್ರವರಿ 22ರಿಂದ ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನ ಆರಂಭವಾಗಲಿದೆ ಎಂದು ತಿಳಿಸಿದರು. ರಾಜ್ಯಪಾಲರು ಅಧಿವೇಶನದಲ್ಲಿ ಭಾಷಣ ಮಾಡಲಿದ್ದಾರೆ ಎಂದು ಹೇಳಿದರು. ನರೇಗಾ ಯೋಜನೆ ಕುರಿತಂತೆ ವಿಶೇಷ ಅಧಿವೇಶನ ನಡೆಸಲಾಗುತ್ತದೆ. ನರೇಗಾ ಬಗ್ಗೆ ವಿಸ್ತೃತ ಚರ್ಚೆ ಮಾಡಲಾಗುತ್ತದೆ