ಹೊಸಪೇಟೆ: ನಗರದ ಡಿಸಿ ಕಚೇರಿಯಲ್ಲಿ ಜಿಲ್ಲಾಡಳಿತದ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ
ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಇಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮವನ್ನು ವಿಜಯನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಕವಿತಾ.ಎಸ್.ಮನ್ನಿಕೇರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.