ಮೂಡುಬಿದಿರೆ: ಮಂಗಳೂರಿಗೆ ಪ್ರಧಾನಿ ಮೋದಿ, ಸ್ವಾಗತಕ್ಕೆ ಸಕಲ ಸಿದ್ಧತೆ ಪೂರ್ಣ:. ನಗರದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು
ಏಪ್ರಿಲ್ 14 ರಂದು ಪ್ರಧಾನಿ ನರೇಂದ್ರ ಮೋದೀ ನಗರಕ್ಕೆ ಬರುತಿದ್ದು ಮೋದಿ ಸ್ವಾಗತಕ್ಕೆ ಸಕಲ ಸಿದ್ಧತೆ ಪೂರ್ಣ ಗೊಂಡಿದೆ ಎಂದು ನಳಿನ್ ಕುಮಾರ್ ಕಟೀಲು ಹೇಳಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ಸಂಜೆ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ನಿಕಟಪೂರ್ವ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದ್ರೆ, ಪಕ್ಷದ ಹಿರಿಯ ಮುಖಂಡ, ಚುನಾವಣಾ ಸಂಚಾಲಕ ನಿತಿನ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಕಿಶೋರ್ ಬೊಟ್ಯಾಡಿ, ಯತೀಶ್ ಅರ್ವಾರ, ನಿಕಟ ಪೂರ್ವ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಹಿರಿಯ ಮುಖಂಡರಾದ ಮೋನಪ್ಪ ಭಂಡಾರಿ ಉಪಸ್ಥಿತರಿದ್ದರು.