ಚಳ್ಳಕೆರೆ: ಅಬ್ಬೆನಹಳ್ಳಿ ಗ್ರಾಮದಲ್ಲಿ ಲಿಂಗತ್ವ ಆಧಾರಿತ ದೌರ್ಜನ್ಯ ವಿರುದ್ಧ ರಾಷ್ಟ್ರೀಯ ಅಭಿಯಾನ
ಚಳ್ಳಕೆರೆ:-ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಹಾಗೂ ಶ್ರೀ ಪ್ರಣತಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟ ಅಬ್ಬೇನಹಳ್ಳಿ ವತಿಯಿಂದ ಲಿಂಗತ್ವ ಆಧಾರಿತ ದೌರ್ಜನ್ಯ ವಿರುದ್ಧ ರಾಷ್ಟ್ರೀಯ ಅಭಿಯಾನ ಮತ್ತು ವಾರ್ಷಿಕ ಮಹಾಸಭೆ ಕಾರ್ಯಕ್ರಮದ ನಡೆಯಿತು. ಜಾಗೃತಿ ವ್ಯವಸ್ಥಾಪಕರಾದ ತಿಪ್ಪೇಸ್ವಾಮಿ ಮಾತನಾಡಿ, ಲಿಂಗ ಅಸಮಾನತೆಯು ಆರೋಗ್ಯ, ಶಿಕ್ಷಣ, ವ್ಯಾಪಾರ ಸೇರಿ ಅನೇಕ ಕ್ಷೇತ್ರಗಳಲ್ಲಿ ಮಹಿಳೆಯರನ್ನು ದುರ್ಬಲಗೊಳಿಸುತ್ತದೆ. ಲಿಂಗ ಅಸಮಾನತೆ ಮತ್ತು ತಾರತಮ್ಯದಿಂದ ಸಮಾಜದಲ್ಲಿ ಏರುಪೇರು ಉಂಟಾಗುತ್ತದೆ ಎಂದರು.